ಮಂಕುತಿಮ್ಮನ ಕಗ್ಗ — ದಿನಕ್ಕೊಂದು ಕಗ್ಗ 02
ಜೀವ ಜಡರೂಪ ಪ್ರಪಂಚವನದಾವುದೋ। ಆವರಿಸಿಕೊಂಡುಮೊಳನೆರೆದುಮಿಹುದಂತೆ॥ ಭಾವಕೊಳಪಡದಂತೆ ಅಳತೆಗಳವಡದಂತೆ। ಆ ವಿಶೇಷಕೆ ನಮಿಸೊ – ಮಂಕುತಿಮ್ಮ ॥ ೨ ॥ (ಜೀವ ಜಡ ರೂಪ ಪ್ರಪಂಚವನು ಅದಾವುದೋ ಆವರಿಸಿಕೊಂಡು ಒಳನೆರೆದು ಇಹುದಂತೆ ಭಾವಕ್ಕೆ ಒಳಪಡದಂತೆ ಅಳತೆಗೆ ಅಳವಡದಂತೆ ಆ ವಿಶೇಷಕೆ ಮಣಿಯೋ- ಮಂಕುತಿಮ್ಮ )(ಒಳನೆರೆದು=ಒಳಗೆ ತುಂಬಿ , ಅಳವಡದಂತೆ = ಸಿಕ್ಕದಂತೆ, ಇಹುದಂತೆ = ಇದೆಯಂತೆ) ಈ ಪ್ರಪಂಚದಲ್ಲಿ ಇರುವುದು ಎರಡೇ. ಒಂದು ಜಡ ಮತ್ತು ಮತ್ತೊಂದು ಜೀವ. ಜಡವೆಂದರೆ ಚೇತನವಿಲ್ಲದ್ದು. ಜೀವವೆಂದರೆ ಚೇತನ . ಇವೆರಡರ ಸಮ್ಮಿಲನವೇ ಜಗದ್ವ್ಯಾಪಾರ ಇವೆರಡರಲ್ಲೂ […]