Blog

ಮಂಕುತಿಮ್ಮನ ಕಗ್ಗ – ದಿನಕ್ಕೊಂದು ಕಗ್ಗ 4

ಏನು ಜೀವನದರ್ಥ? ಏನು ಪ್ರಪಂಚಾರ್ಥ? । ಏನು ಜೀವಪ್ರಪಂಚಗಳ ಸಂಬಂಧ? ॥ ಕಾಣದಿಲ್ಲಿ‍ರ್ಪುದೇನಾನುಮುಂಟೆ? ಅದೇನು? । ಜ್ಞಾನಪ್ರಮಾಣವೇಂ? – ಮಂಕುತಿಮ್ಮ ॥ ೪ ॥ ಕಾಣದಿಲ್ಲಿರ್ಪುದೇನಾನುಮುಂಟೆ = ಕಾಣದೆ + ಇಲ್ಲಿ+ ಇರ್ಪುದು(ಇರುವುದು)+ಏನಾನುಂ( ಏನಾದರೂ)+ ಉಂಟೆ “ಈ ನಮ್ಮ ಜೀವನಕ್ಕೆ ಏನಾದರೂ ಅರ್ಥ ಇದೆಯೇ? ನಾವಿರುವ ಈ ಪ್ರಪಂಚದ ಅರ್ಥವೇನು? ನಮ್ಮ ಮತ್ತು ನಾವು ಇರುವ ಈ ಪ್ರಪಂಚದ ಪರಸ್ಪರ ಸ೦ಬ೦ಧವೇನು? ಇವೆರಡನ್ನೂ ಬೆಸೆದಿರುವ, ನಮ್ಮ ಕಣ್ಣಿಗೆ ಕಾಣದ ಒಂದು ಶಕ್ತಿ ಏನಾದರೂ ಇದೆಯೇ? ಹಾಗಿದ್ದರೆ ಅದೇನು? […]

View More

ಮಂಕುತಿಮ್ಮನ ಕಗ್ಗ – ದಿನಕ್ಕೊಂದು ಕಗ್ಗ 0೩

ಇಹುದೊ ಇಲ್ಲವೊ ತಿಳಿಯಗೊಡದೊಂದು ವಸ್ತು ನಿಜ। ಮಹಿಮೆಯಿಂ ಜಗವಾಗಿ ಜೀವವೇಷದಲಿ ॥ ವಿಹರಿಪುದದೊಳ್ಳಿತೆಂಬುದು ನಿಸದವಾದೊಡಾ । ಗಹನ ತತ್ತ್ವಕೆ ಶರಣೊ – ಮಂಕುತಿಮ್ಮ ॥ ೩ ॥ ತಿಳಿಯಗೊಡದೊಂದು=ತಿಳಿಯಗೊಡದ ಒಂದು ವಿಹರಿಪುದದೊಳ್ಳಿತೆಂಬುದು = ವಿಹರಿಪುದು ( ವಿಹಾರ ಮಾಡುವುದು) +ಅದು+ಒಳ್ಳಿತು = ಒಳ್ಳೆಯದು +ಎಂಬುದು ನಿಸದವಾದೊಡಾ = ನಿಸದವಾದೊಡೆ + ಆ ವಿಹಾರಮಾಡುವುದು ಎಂದರೆ, ಎಲ್ಲದರಲ್ಲೂ ವ್ಯಾಪಕವಾಗಿ ಚೈತನ್ಯ ರೂಪದಲ್ಲಿರುವುದು ಎಂದೂ ಅರ್ಥೈಸಬಹುದು. ನಿಸದವಾದೊಡೆ ಎಂದರೆ ನಿಜವಾದರೆ ಎಂದೇ ಅರ್ಥೈಸಬೇಕು. ಮಾನವರಲ್ಲಿ ಇದು ಒಂದು ನಿರಂತರ ಪ್ರಶ್ನೆ. […]

View More

ಮಂಕುತಿಮ್ಮನ ಕಗ್ಗ — ದಿನಕ್ಕೊಂದು ಕಗ್ಗ 02

ಜೀವ ಜಡರೂಪ ಪ್ರಪಂಚವನದಾವುದೋ। ಆವರಿಸಿಕೊಂಡುಮೊಳನೆರೆದುಮಿಹುದಂತೆ॥ ಭಾವಕೊಳಪಡದಂತೆ ಅಳತೆಗಳವಡದಂತೆ। ಆ ವಿಶೇಷಕೆ ನಮಿಸೊ – ಮಂಕುತಿಮ್ಮ ॥ ೨ ॥ (ಜೀವ ಜಡ ರೂಪ ಪ್ರಪಂಚವನು ಅದಾವುದೋ ಆವರಿಸಿಕೊಂಡು ಒಳನೆರೆದು ಇಹುದಂತೆ ಭಾವಕ್ಕೆ ಒಳಪಡದಂತೆ ಅಳತೆಗೆ ಅಳವಡದಂತೆ ಆ ವಿಶೇಷಕೆ ಮಣಿಯೋ- ಮಂಕುತಿಮ್ಮ )(ಒಳನೆರೆದು=ಒಳಗೆ ತುಂಬಿ , ಅಳವಡದಂತೆ = ಸಿಕ್ಕದಂತೆ, ಇಹುದಂತೆ = ಇದೆಯಂತೆ) ಈ ಪ್ರಪಂಚದಲ್ಲಿ ಇರುವುದು ಎರಡೇ. ಒಂದು ಜಡ ಮತ್ತು ಮತ್ತೊಂದು ಜೀವ. ಜಡವೆಂದರೆ ಚೇತನವಿಲ್ಲದ್ದು. ಜೀವವೆಂದರೆ ಚೇತನ . ಇವೆರಡರ ಸಮ್ಮಿಲನವೇ ಜಗದ್ವ್ಯಾಪಾರ ಇವೆರಡರಲ್ಲೂ […]

View More

ಮಂಕುತಿಮ್ಮನ ಕಗ್ಗ — ದಿನಕ್ಕೊಂದು ಕಗ್ಗ 01

ಶ್ರೀ ವಿಷ್ಣು ವಿಶ್ವಾದಿ ಮೂಲ ಮಾಯಾಲೋಲ । ದೇವ ಸರ್ವೇಶ ಪರಬೊಮ್ಮನೆಂದು ಜನಂ ॥ ಆವುದನು ಕಾಣದೊಡಮಳ್ತಿಯಿಂ ನಂಬಿಹುದೊ । ಆ ವಿಚಿತ್ರಕೆ ನಮಿಸೊ – ಮಂಕುತಿಮ್ಮ ॥ ೧ ॥ ವಿಶ್ವಕ್ಕೆ ಮೂಲವಾದ ಶ್ರೀ ವಿಷ್ಣು, ಮಾಯಾಲೋಲ, ದೇವರು, ಪರಬ್ರಹ್ಮ, ಸರ್ವಕ್ಕೂ ಒಡೆಯನಾದ ಪರಮ ಪುರುಷ ಹೀಗೆ ಹತ್ತು ಹಲವಾರು ಹೆಸರುಗಳಿಂದ ಯಾವುದನ್ನು ಜನರು ಕಾಣದಿದ್ದರೂ ಪ್ರೀತಿ ಮತ್ತು ಭಕ್ತಿಯಿಂದ ನಂಬಿರುವರೋ ಆ ವಿಚಿತ್ರಕ್ಕೆ ನಮಿಸು ಎಂದು ಹೇಳುತ್ತಾರೆ ಶ್ರೀ ಗುಂಡಪ್ಪನವರು. ನಾವಿರುವ ಭೂಮಿಯಂತಹ 9 […]

View More
1 2
Call Now Button